Breaking News

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ

Spread the love

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು  ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್  ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೊಮ್ಮಾಯಿ ಹೊರಡಿಸಿದ ಪ್ರಕರಣೆಯಲ್ಲೇನಿದೆ?

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ” ಎಂದಿದ್ದಾರೆ.

“ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

Spread the loveಹಾವೇರಿ: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ