Breaking News

ರಾಂಪೂರದಲ್ಲಿ ಚರಂತಿಮಠ ಪರ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

Spread the love

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಂಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾರ್ವಜನಿಕ ಸಭೆಯಲ್ಲಿ ಮತಯಾಚನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಚರಂತಿಮಠರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಣ, ಹೆಂಡ ಮತ್ತು ಜಾತಿ ಆಧಾರಿತ ರಾಜಕಾರಣಕ್ಕೆ ಜನರು ತಲೆಬಾಗುವುದಿಲ್ಲ; ಬದಲಾವಣೆಯ ಪರ ಜನರು ತೀರ್ಮಾನಿಸಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಿದೆ ಎಂದು ಆರೋಪಿಸಿದ ಅವರು, ಭಾಗ್ಯಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಪ್ರಶ್ನೆ ಎತ್ತಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಯುವಕರಿಗೆ ನೀಡಬೇಕಾದ ಸಹಾಯಧನ ಸೇರಿದಂತೆ ಹಲವಾರು ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಗ್ಯಾರಂಟಿ ಯೋಜನೆಗಳು ಜನರಿಗೆ ನಿಜವಾದ ಪ್ರಯೋಜನ ತಂದಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಚರಂತಿಮಠರ ಕೊಡುಗೆ ಗಮನಾರ್ಹವಾಗಿದೆ ಎಂದು ಹೇಳಿದ ಅವರು, ನಿರುದ್ಯೋಗ ಸಮಸ್ಯೆಗೆ ಸಮರ್ಪಕ ಪರಿಹಾರ ದೊರಕಿಲ್ಲ ಎಂದು ಟೀಕಿಸಿದರು.
ಸಂಸದ ಬಸವರಾಜ ಬೊಮ್ಮಾಯಿ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಚರಂತಿಮಠರನ್ನು ಮತ್ತೆ ಗೆಲ್ಲಿಸುವಂತೆ ಮನವಿ ಮಾಡಿದರು. ಬಾಗಲಕೋಟೆ ಹಾಗೂ ಬಾದಾಮಿ ಪ್ರದೇಶಗಳ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು, ಚುನಾವಣೆಯನ್ನು ದಿಕ್ಕುತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ, ಕಾರ್ಯಕರ್ತರು ಮತ್ತು ಜನರ ಬೆಂಬಲದಿಂದ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಗಾಲಿ ಜನಾರ್ದನ ರೆಡ್ಡಿ, ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಸಿ.ಸಿ. ಪಾಟೀಲ್, ರಮೇಶ ಕತ್ತಿ,ಎ.ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Spread the loveಬಾಗಲಕೋಟೆ: ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ನೀವು ಬಾಗಲಕೋಟೆಗೆ ಬಂದು ಐದು ದಿನ ಬಂದು ಪ್ರಚಾರ ಮಾಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ