Breaking News

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Spread the love

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ  ಮುಳುಗಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ  ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಗದಗ (Gadag) ಮೂಲದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಬನ್ನೂರು ಸಮೀಪದ ಭದ್ರಾ ರೆಸಾರ್ಟ್‌ನಲ್ಲಿ ಆತ ತಂಗಿದ್ದ. ಏ.5ರ ಸಂಜೆ ಭದ್ರಾ ನದಿಯಲ್ಲಿ ಆತ ನಾಪತ್ತೆಯಾಗಿದ್ದ. ಬಳಿಕ ಬಾಳೆಹೊನ್ನೂರು ಪೊಲೀಸರು ಹಾಗೂ ಸ್ಥಳಿಯರು ಶೋಧ ನಡೆಸಿದ್ದರು. ಭಾನುವಾರ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಇಂದು (ಏ.6) ಶೋಧ ನಡೆಸಿದಾಗ ನದಿಯಲ್ಲಿ ಆತನ ಶವ ಪತ್ತೆಯಾಗಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Spread the loveಚಿಕ್ಕಮಗಳೂರು: ಪಿಯುಸಿ ಓದುತ್ತಿರುವ ಹುಡುಗನಿಗೆ ಎಸ್‌ಎಸ್‌ಎಲ್‌ಸಿ ಹುಡುಗಿ  ಮೇಲೆ ಪ್ರೇಮಾಂಕುರವಾಗಿ (Love), ಇಬ್ಬರು ಒಬ್ಬರನ್ನೊಬ್ನರು ಪ್ರೀತಿಸುತ್ತಿದ್ದು, ಇಬ್ಬರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ