Breaking News

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತನನ್ನು ಅಶೋಕ ವಡ್ಡರ (27) ಎಂದು ಗುರುತಿಸಲಾಗಿದ್ದು, ಆಟೋ ನಂಬರ್ ಹಾಕುವ ವಿಚಾರಕ್ಕೆ ಉಂಟಾದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಆರೋಪಿಗಳಾದ ಶಿವಾ ವಡ್ಡರ್, ಸಾಗರ ವಡ್ಡರ್ ಹಾಗೂ ವಿನೋದ ವಡ್ಡರ್ ಅವರು ಅಶೋಕನ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದ್ದಾರೆ. ಬಳಿಕ ಘಟನೆ ಮರೆಮಾಚಲು ಗಲಾಟೆ ನಡೆದಿದೆ ಎಂದು ನಾಟಕವಾಡಿ ತಾವೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಆದರೆ ಆರೋಪಿಗಳ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆಯಲ್ಲಿ ಪೊಲೀಸರು ಕಠಿಣವಾಗಿ ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮೂವರನ್ನೂ ಬಂಧಿಸಿದ ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ