Breaking News

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Spread the love

ದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ.

ಇನ್ನು, ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಅವರ ಪತ್ನಿ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ. ದುಬೈನಲ್ಲಿ ಆಸ್ತಿಗಳನ್ನು, ಅಮೆರಿಕದಲ್ಲಿ ಬೇನಾಮಿ ಕಂಪನಿಗಳಲ್ಲಿ ಆಸ್ತಿಗಳನ್ನು ಹೊಂದಿದ್ದಾರೆ ಅಂತ ಕಾಂಗ್ರೆಸ್ ನಾಯಕ ಪವನ್ ಖೇರಾ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಸಿಎಂ ಹಿಮಂತ್ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ದೆಹಲಿಯ ನಿವಾಸದ ಮೇಲೆ ಅಸ್ಸಾಂ-ದೆಹಲಿ ಪೊಲೀಸರ ದಾಳಿ ನಡೆಸಿದ್ರು. ಪೊಲೀಸರ ದಾಳಿಯ ವಿಚಾರ ತಿಳಿಯುತ್ತಲೇ ಪವನ್‌ಖೇರಾ ಹೈದರಾಬಾದ್‌ಗೆ ಓಡಿ ಹೋಗಿದ್ದಾರೆ ಅಂತ ಬಿಜೆಪಿಗರು ಲೇವಡಿ ಮಾಡಿದ್ದಾರೆ.


Spread the love

About Laxminews 24x7

Check Also

ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು

Spread the loveಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ