Breaking News

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Spread the love

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ  ಮಲ್ಲತ್ತಹಳ್ಳಿಯಲ್ಲಿ ನಡೆದಿದೆ.

ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ.

ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ:ಬಾಯ್ ಪ್ರೇಂಡ್ ಜೊತೆಗೆ ಸೇರಿ ಪತಿಯ ಭೀಕರ ಹತ್ಯೆ ಮಾಡಿಸಿದ ಪತ್ನಿ

Spread the loveಬೆಳಗಾವಿಯ ಟಿಳಕವಾಡಿ ಪೊಲೀಸರಿಂದ ರೋಚಕ ಪ್ರಕರಣ ಬಯಲು ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ ಸೂಪ್ಪಣ್ಣವರ (40) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ