ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ.
ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ.
ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ ಜಾರಿ ಮಾಡುವಂತೆ ಒತ್ತಾಯಿಸಿದ್ರು.
ಈ ಸಂದರ್ಭದಲ್ಲಿ ವಕೀಲರಾದ ನಿತಿನ್ ಬಾಳ ಬಂಡಿ, ಶ್ವೇತಾ ಕುಲಕರ್ಣಿ, ಸುಜಿತ್ ಮುಳಗುಂದ ಮನವಿ ನೀಡಿದ್ದಾರೆ .
ಈಗಾಗಲೇ ಜಿಲ್ಲೆಯಲ್ಲಿ ಅಥಣಿ, ಗೋಕಾಕ ಸೇರಿ ಐದು ತಾಲೂಕುಗಳಲ್ಲಿ ಒಂದು ವಾರದವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದೆ.