ಅಥಣಿ : ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಶಾಸಕರಾದ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಮರಳಿ ಬರುವುದಿಲ್ಲ, ಒಂದು ವೇಳೆ ಬಿಜೆಪಿಗೆ ಬಂದರೆ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಬಿಜೆಪಿ ನಾಯಕರ ಬಗ್ಗೆ ಮತ್ತು ಮತಕ್ಷೇತ್ರದ ಜನರಿಗೆ ಹೇಳಿದ ಭಾಷಣಗಳನ್ನು ಎಲ್‌ಇಡಿ ಸ್ಟ್ರೀನ್ ಮೂಲಕ ತೋರಿಸುತ್ತೇವೆ. ಅವರು ಬಿಜೆಪಿಗೆ ಬರಲಿದ್ದಾರೆ ಎಂಬುದನ್ನು ಮತಕ್ಷೇತ್ರದಲ್ಲಿ ಸೃಷ್ಟಿ ಮಾಡಲಾಗುತ್ತಿದೆ.
ಲಕ್ಷ್ಮಣ ಸವದಿ ಬಿಜೆಪಿಗೆ ಬರುತ್ತಾರೆ ಎಂದು ಬೀದಿಯಲ್ಲಿ ಜನ ಹೇಳುತ್ತಿದ್ದಾರೆ. ನಾನು ಹೇಳಿಲ್ಲ, ಅಥಣಿಯ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ತಂತ್ರಗಾರಿಕೆಯನ್ನು ಲಕ್ಷ್ಮಣ ಸವದಿ ಹಾಗೂ ಅವರ ಬೆಂಬಲಿಗರು ಮಾಡುತ್ತಿರುತ್ತಾರೆ. ಇಂತಹ ತಂತ್ರಗಾರಿಕೆಗೆ ಮಾತುಗಳಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಕಿವಿಗೊಡದೆ ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.
ಬರುವ 2028ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಾವು ಇಂದಿನಿಂದಲೇ ಕೆಲಸ ಮಾಡಬೇಕಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಬಿಜೆಪಿ ಗೆಲ್ಲಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುತ್ತಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವುದು ಒಂದೇ ಗುರಿ ಎಂದರು.
Laxmi News 24×7