Breaking News

ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಬಿವಿವಿ ಸಂಘಕ್ಕೆ ಮೂರು ರ್ಯಾಂಕ್

Spread the love

ಬಾಗಲಕೋಟೆ: ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಮೂರು ರ್ಯಾಂಕ್ ಪಡೆಯುವುದರ ಮೂಲಕ ಬಿವಿವಿ ಸಂಘದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಲಾ ವಿಜ್ಞಾನ ಮತ್ತು ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಕ್ಷಿ ಮಠಪತಿ 600 ಅಂಕಕ್ಕೆ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಏಳನೇ ಸ್ಥಾನ, ವೀಣಾ ಹಿರೇಮಠ 589 ಅಂಕಗಳಿಂದ ರಾಜ್ಯಕ್ಕೆ 11ನೇ ಸ್ಥಾನ ಮತ್ತು ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಅನುಷಾ ಅಕ್ಕೇರಿ 589 ಅಂಕಗಳಿಂದ ರಾಜ್ಯಕ್ಕೆ 11ನೇ ಸ್ಥಾನ ಪಡೆದುಕೊಂಡು ಬಿವಿವಿ ಸಂಘಕ್ಕೆ ಕೀರ್ತಿ ತಂದಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಿ.ವ್ಹಿ.ವ್ಹಿ ಸಂಘದ ಕಾರ್ಯಾಧ್ಯಕ್ಷರಾದ, ವೀರಣ್ಣ ಸಿ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಆಡಳಿತ ಅಧಿಕಾರಿಗಳಾದ ವ್ಹಿ. ಆರ್. ಶಿರೋಳ, ಡಾ. ವ್ಹಿ ಎಸ್ ಕಟಗಿಹಳ್ಳಿವ್ಮಠ, ಪದನಿಮಿತ್ತ ಕಾರ್ಯದರ್ಶಿಗಳಾದ ಡಾ.ಎಸ್ ಎಮ್ ಗಾಂವ್ಕರ್ ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ