Breaking News

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Spread the love

ಮೈಸೂರು: ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಮಗನ ವಸೂಲಿ ಹೇಗಿದೆ ಎಂಬುದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ. ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆಯ ಇಲ್ಲ. ನಾನು ನನ್ನ ಮಗನನ್ನು ವಸೂಲಿಗಾಗಿ ರಾಜಕೀಯಕ್ಕೆ ತಂದಿಲ್ಲ. ಜನರ ಅಪೇಕ್ಷೆಯಂತೆ ನಿಖಿಲ್ ರಾಜಕೀಯಕ್ಕೆ ಬಂದಿದ್ದಾನೆ ಎಂದು ಸಿಎಂಗೆ ಟಾಂಗ್ ಕೊಟ್ಟರು.

1999 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಮೇತ ನಾವೆಲ್ಲಾ ಸೋತಿದ್ದೆವು. ಆಗ ಸಿದ್ದರಾಮಯ್ಯ, ಮಹಾದೇವಪ್ಪ ಇಬ್ಬರೂ ದೇವೇಗೌಡರ ಮನೆಗೆ ಬಂದಿದ್ದರು. ಸಿದ್ದರಾಮಯ್ಯ ನಂಗೆ ರಾಜಕೀಯ ಸಾಕು ಅಂತಾ ಕಣ್ಣೀರು ಹಾಕಿದ್ದರು. ಅವತ್ತು ಅವರ ಕಣ್ಣೀರಿಗೆ ಬಕೆಟ್ ಇಟ್ಟಿದ್ದರೂ ಬಕೆಟ್ ತುಂಬುತ್ತಿತ್ತು. ಈ ಘಟನೆಗೆ ನಾನೇ ಸಾಕ್ಷಿ. ದೇವೇಗೌಡರು ಸಿದ್ದರಾಮಯ್ಯಗೆ ಸಮಾಧಾನ ಮಾಡಿ ಧೈರ್ಯ ಹೇಳಿ ಬೇರೆ ಬೇರೆ ವ್ಯವಸ್ಥೆ ಮಾಡಿಕೊಟ್ಟರು. ಇದನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದು ಕುಟುಕಿದರು.


Spread the love

About Laxminews 24x7

Check Also

ಸ್ಯಾಲರಿ ಹಣಕ್ಕೆ ಅತ್ತೆ, 1 ಕೋಟಿ ಮೌಲ್ಯದ ಫ್ಲಾಟ್‌ಗಾಗಿ ಮಾವನಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

Spread the loveಮುಂಬೈ: ಅತ್ತೆ-ಮಾವನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ  ಪುಣೆಯಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ