Breaking News

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Spread the love

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ (ಏ.10) ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ ಎಲ್ಲ ಓಎಂಆರ್ ಶೀಟ್‌ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ಎರಡು ಮತ್ತು ಧಾರವಾಡದ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಮುಗಿದ ಕ್ಷಣದಿಂದಲೇ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಸೆಷನ್ಸ್‌ನಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆ ಮುಗಿದ ಕೂಡಲೇ ಓಎಂಆರ್ ಉತ್ತರ ಪತ್ರಿಕೆಗಳನ್ನು ತಂದು ಸ್ಕ್ಯಾನ್ ಮಾಡಲಾಗಿದೆ. ನಂತರ ಅವುಗಳನ್ನು ಪರಿಶೀಲಿಸಿ, ಪರೀಕ್ಷಾ ಕೇಂದ್ರವಾರು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ಯಾರು ಬೇಕಾದರೂ ನೋಡಿಕೊಳ್ಳಬಹುದು. ಇದು ಕೆಇಎ ಅಳವಡಿಸಿಕೊಂಡಿರುವ ಪಾರದರ್ಶಕವಾದ ಕ್ರಮ ಅವರು ಹೇಳಿದ್ದಾರೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ