Breaking News

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Spread the love

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ  ಬಿಡುಗಡೆ ಮಾಡಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಗಳಿಗೆ ನೀಡಲಾಗುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು/ಕಾರ್ಯವಿಧಾನಗಳನ್ನು ತಪ್ಪದೇ ಅನುಸರಿಸಲು ಸೂಚಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

IPL ಆರ್‌ಸಿಬಿ ಫೈನಲ್‌; ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌ – ಗೈಡ್‌ಲೈನ್ಸ್‌ ಬಿಡುಗಡೆ

Spread the loveಬೆಂಗಳೂರು: ಐಪಿಎಲ್‌ 2026 ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಫೈನಲ್‌ ಪ್ರವೇಶಿಸಿದ್ದು, ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನಿಷೇಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ