ಕಲಬುರಗಿ: ಐಪಿಎಲ್ ಬೆಟ್ಟಿಂಗ್ನಲ್ಲಿ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಎಂದು ಗುರುತಿಸಲಾಗಿದೆ. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7