ಬೆಳಗಾವಿ : ಬಾಲಕಿ ಮೇಲೆ ಅಪರಾಧ ಶಿಕ್ಷೆ ಅತ್ಯಾಚಾರ ಎಸಗಿದ್ದ ಅಪರಾಧಿ ಖಾನಾಪುರ ತಾಲೂಕಿನ ನಂದಗಡ ಗ್ರಾಮದ ನಿವಾಸಿ ಕಲ್ಲಪ ಪರುಶುರಾಮ ಸುತಾರ(೨೨) ಎಂಬಾತನಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧ ಲಕ್ಷ ರೂ. ದಂಡ ಹಾಗೂ ಮತ್ತೊಂದು ಪ್ರಕರಣದಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ್ದ ಬೈಲಹೊಂಗಲ ಪಟ್ಟಣದ ನಿವಾಸಿ ನಂದೀಶ ಉರ್ಪ ನಂದು ಬಂಡಿವಡ್ಡರ ಎಂಬಾತನಿಗೆ ೩ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧೦ ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ.
ಮದುವೆ ಮಾಡಿಕೊಳ್ಳುತ್ತೆನೆ ಎಂದು ನಂಬಿಸಿ ಅಪರಾಧಿ ಕಲ್ಲಪ ಪರುಶುರಾಮ ಸುತಾರ(೨೨) ಅವರನ್ನು ಅಪಹರಣ ಮಾಡಿ ಬಾಲಕತ್ಯಾಚಾರ ಎಸಗಿದ್ದ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಎಲ್.ಹೆಚ್.ಗೌಂಡಿ ದೋಷಾರೋಪಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಬಾಲಕಿಗೆ ಕಿರುಕುಳ ನೀಡುವುದರ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖಾಧಿಕಾರಿ ಎಫ್,ವೈ. ಮಲ್ಲೂರ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯದ ನ್ಯಾಯಾದೀಶೆ ಸಿ.ಎಂ ಪುಷ್ಪಲತಾ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ವಾದ ಮಂಡಿಸಿದ್ದಾರೆ.
Laxmi News 24×7