Breaking News

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Spread the love

ನೆಲಮಂಗಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಮೃತ ಯುವಕನನ್ನು 28 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ.

ಇವರು ನೆಲಮಂಗಲ ಟೌನ್‌ನ ವಾಜರಹಳ್ಳಿಯಲ್ಲಿ ವಾಸವಾಗಿದ್ದು, ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು.

ದಿಲೀಪ್ ಅವರಿಗೆ ಜಿಮ್‌ನಲ್ಲಿ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ.

ಆರೋಪಿ ಯೋಗಿತಾ (42) ಮದುವೆಯಾಗಿದ್ದರೂ ದಿಲೀಪ್ ಜೊತೆ ಸಂಬಂಧ ಬೆಳೆಸಿ, ನಂತರ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ.

ಘಟನೆಯ ದಿನ, ದಿಲೀಪ್ ಯೋಗಿತಾಳಿಗೆ ಕರೆ ಮಾಡಿ, ತನ್ನ ಮನೆಯ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೂ, ರಾತ್ರಿ ವೇಳೆ ಇನ್ಸ್ಟಾಗ್ರಾಮ್ ಮೂಲಕ ದಿಲೀಪ್ ಅವರ ಸಹೋದರಿಗೆ ಯೋಗಿತಾ ಮೆಸೇಜ್ ಮಾಡಿ,
“ನಿನ್ನ ಸಹೋದರ ರೂಮಿನಲ್ಲಿ ಸೂಸೈಡ್ ಮಾಡಿಕೊಂಡಿದ್ದಾನೆ” ಎಂದು ತಿಳಿಸಿದ್ದಾಳೆ.

ಈ ಮಾಹಿತಿ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನೆಗೆ ಬಂದು ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸೊಕೊ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ