Breaking News

ಧಾರವಾಡ: ಇಸ್ಮಾಯಿಲ್ ತಮಟಗಾರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು

Spread the love

ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಿರುದ್ಧ ಇದೀಗ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವರದಿ: ಕಳೆದ ಏಪ್ರಿಲ್ 7 ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ಲವ್ ಜಿಹಾದ್ ವಿರುದ್ಧ ‘ಜನಾಕ್ರೋಶ ಪ್ರತಿಭಟನೆ’ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಮುಸ್ಲಿಂ ಸಮುದಾಯವನ್ನು ಅವಮಾನಿಸಿದ್ದಾರೆ ಮತ್ತು ಈ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಆರೋಪಿಸಿ ಇಸ್ಮಾಯಿಲ್ ತಮಟಗಾರ ಈ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡುವ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಸೂಲಿಬೆಲೆ ಅವರ ವಿರುದ್ಧ ಅತ್ಯಂತ ಕೆಟ್ಟ ಪದಬಳಕೆ ಮಾಡಿ ನಿಂದಿಸಿದ್ದರು.
ಇದೀಗ ಈ ವಿಷಯವನ್ನೇ ಗಂಭೀರವಾಗಿ ಪರಿಗಣಿಸಿರುವ ಹಿಂದೂಪರ ಸಂಘಟನೆಗಳು, ತಮಟಗಾರ ವಿರುದ್ಧ ತಿರುಗಿಬಿದ್ದಿವೆ. “ನಾವು ರಸ್ತೆಯಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧವಾಗಿ ಅನುಮತಿ ಪಡೆದಿದ್ದೆವು. ಆದರೆ ಇಸ್ಮಾಯಿಲ್ ತಮಟಗಾರ ಅವರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರ ವಿರುದ್ಧ ಅವಾಚ್ಯ ಶಬ್ದ ಬಳಸುವ ಮೂಲಕ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ” ಎಂದು ಮುಖಂಡರು ಕಿಡಿಕಾರಿದ್ದಾರೆ.
ತಕ್ಷಣವೇ ತಮಟಗಾರ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು, ಇಲ್ಲವಾದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ