Breaking News

ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.ಟಗರು ಪುಟ್ಟಿ

Spread the love

ಬೆಂಗಳೂರು: ಟಗರು ಹಾಗೂ ಕೆಂಡಸಂಪಿಗೆ ಸಿನಿಮಾ ಖ್ಯಾತಿಯ ಮನ್ವಿತಾ ಕಾಮತ್ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಆಗಾಗ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಪೋಸ್ಟ್ ಹಾಕುತ್ತಿರುತ್ತಾರೆ. ಅದೇ ರೀತಿ ಸಾಮಾಜಿಕ ಆಗುಹೋಗುಗಳ ಕುರಿತು ಸಹ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಪೊಲೀಸರಿಗೆ ಸಂಬಂಧಿಸಿದಂತೆ ಪೋಸ್ಟ್ ಹಾಕಿ ಕಿಡಿ ಕಾರಿದ್ದಾರೆ.

ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಲಾಕ್‍ಡೌನ್ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದೆ. ಭಾರತದಾದ್ಯಂತ ಚಿತ್ರೀಕರಣವೇ ಸ್ಥಗಿತವಾಗಿದೆ. ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಶೂಟಿಂಗ್‍ಗೆ ಅನುಮತಿ ನೀಡಿದರೂ ಚಿತ್ರೀಕರಣಕ್ಕೆ ಆಗಮಿಸಲು ಹೆಚ್ಚು ಜನ ಭಯ ಪಟುತ್ತಿದ್ದಾರೆ.

ಅಲ್ಲದೆ ಬಹುತೇಕ ನಟ ನಟಿಯರು ಲಾಕ್‍ಡೌನ್ ಸಮಯದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಇನ್ನೂ ಹಲವರು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.

ನಟಿ ಮನ್ವಿತಾ ಕಾಮತ್ ಲಾಕ್‍ಡೌನ್ ದಿನಗಳನ್ನು ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಇದೇ ವೇಳೆ ಪೊಲೀಸರ ದುರ್ವರ್ತನೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಬೀದಿ ಬದಿ ಬಾಳೆಹಣ್ಣು ಮಾರುತ್ತಿದ್ದ ವೃದ್ಧ ವ್ಯಾಪಾರಿಯ ಬಳಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದು, ಆತ ಮಾರುತ್ತಿದ್ದ ಹಣ್ಣಿನ ಟ್ರೈಯನ್ನು ಎತ್ತಿಕೊಂಡು ಹೋಗುವ ದೃಶ್ಯವನ್ನು ಟ್ವೀಟ್ ಮಾಡಿದ್ದಾರೆ.

ವೃದ್ಧ ವ್ಯಾಪಾರಿಯಿಂದ ಬಾಳೆಹಣ್ಣು ತುಂಬಿದ್ದ ಟ್ರೈ ತೆಗೆದುಕೊಂಡು ಪೊಲೀಸರು ತಮ್ಮ ಜೀಪ್‍ನಲ್ಲಿ ಇಟ್ಟುಕೊಳ್ಳುತ್ತಾರೆ. ಆಗ ವೃದ್ಧ ಅಳಲು ಪ್ರಾರಂಭಿಸುತ್ತಾರೆ. ಇಷ್ಟಾದರೂ ಪೊಲೀಸರು ನೋಡುತ್ತಲೇ ಇರುತ್ತಾರೆಯೇ ಹೊರತು ಟ್ರೈ ಮರಳಿ ನೀಡುವುದಿಲ್ಲ. ತಮ್ಮ ಜೀಪ್‍ನಲ್ಲಿ ತುಂಬಿಕೊಳ್ಳುತ್ತಾರೆ. ಇದರಿಂದ ದುಃಖಿತನಾದ ವ್ಯಾಪಾರಿ ಸೈಕಲ್ ತಳ್ಳಿಕೊಂಡು ಮುಂದೆ ಸಾಗುತ್ತಾರೆ. ಈ ವಿಡಿಯೋ ಟ್ವೀಟ್ ಮಾಡಿ ಮನ್ವಿತಾ, ಯಾಕೆ….? ಎಂದು ಬರೆದು ಬೇಸರದ ಚಿನ್ಹೆ ಹಾಕಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ