Breaking News

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Spread the love

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ತಲೆಬುರುಡೆ ಹಾಗೂ ಕೈ ಕಾಲಿನ ಕೆಲ ಮೂಳೆಗಳು ಪತ್ತೆಯಾಗಿದೆ.

ತೋಟದ ಮಾಲೀಕ ಕೆಲಸ ಮಾಡುವ ವೇಳೆ ಅವಶೇಷಗಳನ್ನ ನೋಡಿದಾಗ ಆತಂಕಕ್ಕೆ ಕಾರಣವಾಗಿದ್ದು, ನಂತರ ದಾಬಸ್ ಪೇಟೆ ಪೊಲೀಸರಿಗೆ  ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಶ್ವಾನದಳ ಪರಿಶೀಲನೆ ನಡೆಸಿದ್ದು ನಾಪತ್ತೆಯಾಗಿದ್ದ ಮಹಿಳೆ ತುಮಕೂರು ನಿವಾಸಿ ಯಮುನಾ ಎಂದು ಗುರುತಿಸಲಾಗಿದೆ.

ಅಸ್ಥಿಯ ಬಳಿ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್‌ ಪತ್ತೆಯಾಗಿತ್ತು, ಕೂಡಲೇ ಕುಟುಂಬಕ್ಕೆ ಮಾಹಿತಿ ನೀಡಿದ ದಾಬಸ್‌ ಪೇಟೆ ಪೊಲೀಸರು, ಕುಟುಂಬಸ್ಥರನ್ನ ಕರೆಸಿ ಮಹಿಳೆಯ ಗುರುತು ಪತ್ತೆ ಮಾಡಿದರು. ಗೃಹಿಣಿ ಯಮುನಾ ನಾಪತ್ತೆ ಬಗ್ಗೆ ಕಳೆದ ತಿಂಗಳು ತುಮಕೂರು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಅಸ್ಥಿಪಂಜರ ಪತ್ತೆ ಪ್ರಕರಣ ಸಂಬಂಧ ದಾಬಸ್ ಪೇಟೆ ಪೊಲೀಸರು ಕೇಸ್‌ ದಾಖಲಿಸಿಕೊಂಡು, ಯಮುನಾ ಸಾವು ಅಸಹಜ ಸಾವೋ ಅಥವಾ ಕೊಲೆಯೋ ಎಂಬುದರ ತನಿಖೆಗೆ ಇಳಿದಿದ್ದಾರೆ.


Spread the love

About Laxminews 24x7

Check Also

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Spread the loveಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ  ಬೆಮಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ