ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಚರ್ಚೆಯಲ್ಲಿ ವಯನಾಡು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಇಂದು ಚಾಣಕ್ಯ ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆಯನ್ನು ನೋಡಿ ಆತನಿಗೆ ಆಘಾತವಾಗುತ್ತಿತ್ತು ಎಂದು ಟಾಂಗ್ ಕೊಟ್ಟಿದ್ದಾರೆ.
ಮಹಿಳಾ ಮೀಸಲಾತಿ ಬೆಂಬಲಿಸಿ ಮಾತನಾಡಿದ ಅವರು, ತಮ್ಮ ಪಕ್ಷವು ಮಹಿಳಾ ಪ್ರಾತಿನಿಧ್ಯವನ್ನು ವಿರೋಧಿಸುತ್ತಿಲ್ಲ. ಆದರೆ ಮಸೂದೆಯ ಸಮಯ ಮತ್ತು ರಚನೆಯ ಹಿಂದಿನ ರಾಜಕೀಯ ಉದ್ದೇಶವನ್ನು ಪ್ರಶ್ನಿಸುತ್ತಿದೆ ಎಂದು ಹೇಳಿದರು. ಆಡಳಿತಾರೂಢ ಎನ್‌ಡಿಎ ಸರ್ಕಾರ ಮಹಿಳೆಯರ ಸಬಲೀಕರಣ ಮಡುವುದಕ್ಕಿಂತ ಹೆಚ್ಚಾಗಿ ಹೆಚ್ಚಾಗಿ ಚುನಾವಣಾ ತಂತ್ರವಾಗಿ ಬಳಸುತ್ತಿದೆ ಎಂದು ದೂರಿದರು.
ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಮಾಡಿದ ಭಾಷಣವನ್ನು ಉಲ್ಲೇಖಿಸಿ, ಸರ್ಕಾರವು ಮಹಿಳಾ ಹಕ್ಕುಗಳ ಪ್ರತಿಪಾದಕ ಎಂದು ಬಿಂಬಿಸಿಕೊಳ್ಳುತ್ತಾ ಸಾಂವಿಧಾನಿಕ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.
ಮೋದಿ ಮಾತನ್ನು ಪ್ರಿಯಾಂಕಾ ಗಾಂಧಿ ಉಲ್ಲೇಖಿಸಿಸುತ್ತಿದ್ದಂತೆ ಅಮಿತ್ ಶಾ ಸೇರಿದಂತೆ ಆಡಳಿತರೂಢ ಬಿಜೆಪಿ ಸಂಸದರು ನಗೆಯಾಡಲು ಆರಂಭಿಸಿದರು. ಅಮಿತ್ ಶಾ ನಗುತ್ತಿರುವುದನ್ನು ನೋಡಿ, ಆಡಳಿತ ಪಕ್ಷವು ಸಂಪೂರ್ಣವಾಗಿ ಸಿದ್ಧವಾಗಿರುವಂತೆ ತೋರುತ್ತಿದೆ. ಒಂದು ವೇಳೆ ಚಾಣಕ್ಯ ಇಂದು ಜೀವಂತವಾಗಿದ್ದರೆ, ಚುನಾವಣೆಗಳನ್ನು ಗೆಲ್ಲಲು ನೀವು ಮಾಡುತ್ತಿರುವ ರಾಜಕೀಯ ಕುತಂತ್ರವನ್ನು ನೋಡಿ ಆತನೇ ಶಾಕ್‌ಗೆ ಒಳಗಾಗುತ್ತಿದ್ದ ಎಂದು ನಗುನಗುತ್ತಲೇ ತಿವಿದರು. ಪ್ರಿಯಾಂಕಾ ಅವರ ಈ ಹೇಳಿಕೆಯಿಂದ ಸದನ ನಗೆಗಡಲಲ್ಲಿ ತೇಲಿತು.
Laxmi News 24×7