Breaking News

ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..

Spread the love

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.

ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೆ ದೇಶದಲ್ಲಿ ಒಟ್ಟು 25,602 ಮಂದಿ ಮಹಾಮಾರಿ ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Spread the loveದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌  ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ