Breaking News

ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Spread the love

ಕಾರವಾರ: ಮೃತ ಪತ್ನಿಯ ಸಹೋದರಿಯನ್ನೇ ವಿವಾಹವಾಗಲು ಸಿದ್ದವಾಗಿದ್ದ ವೈದ್ಯನನ್ನು ಬರ್ಬರವಾಗಿ ಹತ್ಯೆ  ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆಹೆಚ್‌ಬಿ ಕಾಲೋನಿಯಲ್ಲಿ ನಡೆದಿದೆ.

ಡಾ. ರಮೇಶ್ ಕಲಗುಟಕರ್ (51) ಹತ್ಯೆಯಾದ ವೈದ್ಯ. ಕಳೆದ ಎಂಟು ತಿಂಗಳ ಹಿಂದೆ ಇವರ ಪತ್ನಿ ಮೃತಪಟ್ಟಿದ್ದರು. ದಂಪತಿಯ ಇಬ್ಬರು ಗಂಡು ಮಕ್ಕಳ ಪೈಕಿ ಓರ್ವ ವೈದ್ಯನಾಗಿದ್ದರೆ ಮತ್ತೊಬ್ಬ ಎಂಜಿನಿಯರಿಂಗ್‌ ಓದುತ್ತಿದ್ದಾನೆ

ತನ್ನ ಮನೆಯಲ್ಲಿ ವಾಸವಿದ್ದ ರಮೇಶ್‌ ಪತ್ನಿಯ ಸಹೋದರಿಯನ್ನೇ ಸೋಮವಾರ(ಏ.20) ವಿವಾಹವಾಗಬೇಕಿತ್ತು. ಬ್ಯಾಂಕ್‌ನಿಂದ ಮನೆಯಲ್ಲಿ ಮದುವೆಗಾಗಿ ಬಂಗಾರದ ಒಡವೆಗಳನ್ನ ತಂದಿದ್ದ ಇವರನ್ನು ಯಾರೋ ಹತ್ಯೆ ಮಾಡಿದ್ದಾರೆ.

ಸಿಪಿಐ ಶಶಿಕಾಂತ ವರ್ಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ