Breaking News

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ  ತಾಲೂಕಿನಲ್ಲಿ ಅಕಾಲಿಕ‌ ಮಳೆ ಅವಾಂತರ ಸೃಷ್ಟಿಸಿದೆ. ಬಿರುಗಾಳಿ ಮಳೆ  ಅಬ್ಬರಕ್ಕೆ ತಾಲೂಕಿನ ಬೇವನೂರ ಗ್ರಾಮದಲ್ಲಿ 40ಕ್ಕೂ ಅಧಿಕ ಕಂಬಗಳು  ಧರೆಗುರಳಿವೆ. ಪರಿಣಾಮ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಕೊಹಳ್ಳಿ ಗ್ರಾಮದಲ್ಲಿ ರಸ್ತೆ ಮಧ್ಯೆ ಮರ ಬಿದ್ದಿದೆ. ಗಾಳಿಯ ಅಬ್ಬರಕ್ಕೆ ಗ್ರಾಮದ ಶಾಲೆಯ ಮೇಲ್ಛಾವಣಿ ಕಿತ್ತು ಹೋಗಿದೆ. ತಾಲೂಕಿನ, ತಾವಂಶಿ, ಮದಭಾವಿ, ಮಲಬಾದ ಸೇರಿದಂತೆ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಾಗಿದೆ.

ಚಿಕ್ಕೋಡಿ, ಹುಕ್ಕೇರಿ ತಾಲೂಕುಗಳಲ್ಲೂ ಅಬ್ಬರದಿಂದ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟ ಜನ ಮಳೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ