Breaking News

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Spread the love

ಬಳ್ಳಾರಿ: ಲಾರಿ (Lorry) ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ  ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ  ಜಿಲ್ಲೆಯ ಹೊಸಪೇಟೆ  ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೆಳ್ಳುಳ್ಳಿ ಸಾಗಾಟ ಮಾಡುತ್ತಿದ್ದ ಲಾರಿ ಹೊಸಪೇಟೆ ಹೊರವಲಯದ ಟನಲ್‌ನಿಂದ ಡಣಾಪುರದವರೆಗೆ ಬೈಕ್, ಕಾರು ಹಾಗೂ ಬಸ್‌ಗೆ ಹೊಡೆದುಕೊಂಡು ಹೋಗಿದೆ. ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿರೋದರ ಕುರಿತು ಮಾಹಿತಿ ಲಭಿಸಿದೆ. ಅಪಘಾತದ ರಭಸಕ್ಕೆ ಒಂದು ಕಾರು ಅಪ್ಪಚ್ಚಿಯಾಗಿದೆ.

ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ ಎಸ್ ಹಾಗೂ ಮರಿಯಮ್ಮನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲವರಿಗೂ ಗಾಯಗಳಾಗಿವೆ. ಗಾಯಾಳುಗಳೆಲ್ಲರನ್ನೂ ಹೊಸಪೇಟೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

About Laxminews 24x7

Check Also

ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಸೈಲೆಂಟ್​ ಆದ ಶಾಸಕ ಯತ್ನಾಳ್​​: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ

Spread the loveವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ