Breaking News

ನೇಗಿನಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ಮಡಿವಾಳೇಶ್ವರ ಅನುಭವ ಮಂಟಪದ ನೂತನ ಕಟ್ಟಡಕ್ಕೆ ಭೂಮಿ ಪೂಜಾ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ಮಡಿವಾಳೇಶ್ವರ ಅನುಭವ ಮಂಟಪದ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವಾಗಿ ಪೂಜ್ಯಶ್ರೀ ಆತ್ಮರಾಮ ಮಹಾಸ್ವಾಮಿಗಳು, ಗರಗ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.

ಅಡಿಗಲ್ಲು ಪೂಜೆಯನ್ನು ಕಿತ್ತೂರು ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಗ್ರಾಮದಲ್ಲಿರುವ ಬಸವಣ್ಣನವರ ಮೂರ್ತಿಗೆ ಪುಷ್ಪಮಾಲೆ ಅರ್ಪಿಸಿ, ನಂತರ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು, “ಹನಿ ಹನಿ ಕೂಡಿದರೆ ಹಳ್ಳ ಎಂಬಂತೆ ಗ್ರಾಮಸ್ಥರು ಒಗ್ಗಟ್ಟಿನಿಂದ ಸಹಕರಿಸಿದರೆ ಮಂಗಳ ಕಾರ್ಯಾಲಯವನ್ನು ಶೀಘ್ರದಲ್ಲೇ ನಿರ್ಮಿಸಬಹುದು. ಸರ್ಕಾರದಿಂದ ಒಂದು ಕೋಟಿ ರೂಪಾಯಿ ಹಾಗೂ ನನ್ನ ವೈಯಕ್ತಿಕವಾಗಿ 20 ಲಕ್ಷ ರೂಪಾಯಿಗಳನ್ನು ನೀಡಿದ್ದೇನೆ.

ಗ್ರಾಮದ ಕೊಡಗೈದಾನಿಗಳು ಮುಂದೆ ಬಂದು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸಹಾಯ ಮಾಡಬೇಕು” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಆತ್ಮರಾಮ ಮಹಾಸ್ವಾಮಿಗಳು ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ನೇಗಿನಾಳ ಗ್ರಾಮದ ಸರ್ವ ಸದಸ್ಯರು, ರೋಹಿಣಿ ಬಾಬಾಸಾಹೇಬ ಪಾಟೀಲ, ನಾನಾಸಾಹೇಬ ಪಾಟೀಲ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Spread the love ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ