Breaking News

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Spread the love

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ, ಅರಸೀಕೆರೆ  ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು. ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಮಾವ-ಅಳಿಯ ಇಬ್ಬರೂ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಪ್ರತೀಕ್ ಕೆರೆಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಿಲು ಮಾವ ಪ್ರಭಾಕರ್ ಕೂಡ ಕೆರೆಗೆ ಇಳಿದಿದ್ದಾರೆ. ಈಜು ಬಾರದ ಕಾರಣ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸದ್ಯ ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ