Breaking News

ರಾಯಚೂರು: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೂಡಿ ಹಾಕಿ ಹಲ್ಲೆ

Spread the love

ರಾಯಚೂರು: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದಂತಹ ಘಟನೆ ರಾಯಚೂರು ನಗರದ ಐಡಿಎಂಸಿ ಲೇಔಟ್‌ನಲ್ಲಿ ನಡೆದಿದೆ. ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ರೂಮ್‌ನ ಡೋರ್ ಲಾಕ್ ಮಾಡಿದ ಯುವತಿ ಬಳಿಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾಳೆ.
ಮೆಹಬೂಬ್ ಯುವತಿಯಿಂದ ಹಲ್ಲೆಗೊಳಗಾದ ಯುವಕ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೆಹಬೂಬ್ ಕೆಲಸ ಮಾಡುತ್ತಿದ್ದ.

ಆಗಿದ್ದೇನು?

ಮೆಹಬೂಬ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಯುವತಿಯೊಬ್ಬಳು ಚಿಕಿತ್ಸೆಗಾಗಿ ಬಂದಿದ್ದಳು. ಈ ವೇಳೆ ಮೆಹಬೂಬ್ ಆಕೆಗೆ ಚುಡಾಯಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೊರರೋಗಿಗಳ ವಿಭಾಗದಲ್ಲಿ ಕುಳಿತಿದ್ದ ಯುವತಿಗೆ ಯುವಕ ಮೆಹಬೂಬ್ ಕಿಚಾಯಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಯುವತಿ ಕಡೆಯವರು ಮೆಹಬೂಬ್‌ನನ್ನು ಮನೆಗೆ ಎತ್ತು ಹಾಕಿಕೊಂಡು ಹೋಗಿ ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಿನ್ನ ಅಕ್ಕನೂ ಇಲ್ಲಿಗೆ ಬಂದಿದ್ದಳು ಆಕೆಯೂ ಚೆನ್ನಾಗಿದ್ದಳು ಎಂದು ಆರೋಪಿ ಹೇಳಿದ್ದಾನೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ