Breaking News

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Spread the love

ಬೆಂಗಳೂರು: ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್‌  ವಿರುದ್ಧ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ( ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್‌ ಅವರು 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಡಿಸಿಗೆ 500 ರೂಪಾಯಿ ಹಣ ನೀಡಿದ್ರು ಸಚಿವರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು ಕೋರ್ಟ್‌ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಕೋರ್ಟ್‌, ಗೃಹಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ಸೂಚನೆ ನೀಡಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ