Breaking News

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Spread the love

ಕೋಲ್ಕತ್ತಾ: ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆ ಏ.23 ರಂದು ನಿಗದಿಯಾಗಿದ್ದ ರಾಹುಲ್‌ ಗಾಂಧಿ  ಅವರ ಕೋಲ್ಕತ್ತಾ  ಭೇಟಿಯನ್ನ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಚಾರ  ಕಾರ್ಯಕ್ಕಾಗಿ ರಾಹುಲ್‌ ಗಾಂಧಿ ಕೋಲ್ಕತ್ತಾಗೆ ಭೇಟಿ ನೀಡಬೇಕಿತ್ತು. ಆದ್ರೆ ಮಮತಾ ಬ್ಯಾನರ್ಜಿ  ಸರ್ಕಾರ ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪಕ್ಷವು ರಾಹುಲ್‌ ಗಾಂಧಿ ಅವರ ಕಾರ್ಯಕ್ರಮಕ್ಕಾಗಿ ಇಂದು ಸಂಜೆ 6 ಗಂಟೆವರೆಗೂ ಕಾದಿತ್ತು. ಆದ್ರೆ ಸ್ಥಳೀಯರು ಪೊಲೀಸರು ಏಪ್ರಿಲ್‌ 23 ರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಏಪ್ರಿಲ್‌ 25 ಅಥವಾ 26 ರಂದು ಪರಿಷ್ಕೃತ ವೇಳಾಪಟ್ಟಿಗಾಗಿ ಆಡಳಿತಾತ್ಮಕ ಅನುಮೋದನೆಗೆ ಮತ್ತೊಮ್ಮೆ ವಿನಂತಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಟಿಎಂಸಿ ಹೇಳಿದ್ದೇನು?
ಇನ್ನೂ ರಾಹುಲ್‌ ಗಾಂಧಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆಗೆ ಬಂಗಾಳ ಸರ್ಕಾರ ಕಾರಣ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಬಂಗಾಳ ಸಚಿವ ಶಶಿ ಪಂಜಾ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಸಭೆಗಳಿಗೆ 2 ರಿಂದ 7 ದಿನಗಳ ಮೊದಲೇ ಸುವಿಧಾ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳಿಗೂ ಇದು ಅನ್ವಯ. ಅಲ್ಲದೇ ರಾಜ್ಯದ ಉಸ್ತುವಾರಿ ಸರ್ಕಾರ ಅವರ ಭೇಟಿ ರದ್ದುಪಡಿಸಲು ಸಾಧ್ಯವಿಲ್ಲ, ಚುನಾವಣಾ ಆಯೋಗವೇ ಇದಕ್ಕೆ ಉತ್ತರಿಸಬೇಕು ಎಂದು ಹೇಳಿದ್ದಾರೆ.

294 ಸದಸ್ಯರ ಬಲ ಹೊಂದಿರುವ ಬಂಗಾಳ ವಿಧಾನಸಭೆಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತವು 152 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ, ಆದರೆ ಎರಡನೇ ಹಂತವು 142 ಸ್ಥಾನಗಳನ್ನು ಒಳಗೊಂಡಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್‌ ಎಡಪಂಥೀಯರೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದೆ. ಹೀಗಾಗಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಭಿನ್ನಾಭಿಪ್ರಾಯ ಹೊಂದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ