Breaking News

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Spread the love

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ದೋಷಿ ಎಂದು ಘೋಷಿಸಿ, 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಎನ್‌ಐಎ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದು (ಏ.21) ಮಧ್ಯಾಹ್ನಕ್ಕೆ ತೀರ್ಪು ಕಾಯ್ದಿರಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 7 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 48 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ

ಬೆಂಗಳೂರಿನಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿಯೇ ಆರ್.ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು.

ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪ್ ಪತ್ತೆ ಹಚ್ಚಿ, ವಶಪಡಿಸಿಕೊಂಡಿದ್ದರು. ಆರೋಪಿಗಳ ಬಂಧನ ಬಳಿಕ ಪ್ರಕರಣ ಎನ್‌ಐಎ ಕೈಗೆತ್ತಿಕೊಂಡು ವಿಚಾರಣೆ ಮಾಡಿತ್ತು. ವಿಚಾರಣೆ ವೇಳೆ ಆರೋಪಿಗಳು ಬೆಂಗಳೂರು ಸ್ಫೋಟದ ರೂವಾರಿ ಟಿ.ನಾಜೀರ್ ಜೊತೆ ಸಂಪರ್ಕ ಹೊಂದಿದ್ದರು. ಜೈಲಿನಲ್ಲಿ ನಾಜೀರ್‌ನಿಂದ ಉಗ್ರವಾದಕ್ಕೆ ಪ್ರೇರಣೆಯಾಗಿ ಜೈಲಿನಿಂದ ಹೊರಬಂದ ಬಳಿಕ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದರು. ಬಾಂಬ್ ಬ್ಲಾಸ್ಟ್ ಮಾಡುವ ಮೂಲಕ ಟಿ.ನಾಸೀರ್ ಅನ್ನು ಪೊಲೀಸರಿಂದ ಬಚಾವ್ ಮಾಡಲು ಆರೋಪಿಗಳು ಪ್ರಯತ್ನ ಮಾಡಿದ್ದರು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ