Breaking News

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Spread the love

ಬೆಂಗಳೂರು: ಸೈಬರ್ ವಂಚಕರ  ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ  ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದಾನೆ. ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಯುವಕ ಮತ್ತು ಯುವತಿ ಒಟ್ಟಿಗೆ ವಾಸವಾಗಿದ್ದು, ಕೆಲ ದಿನಗಳ ಹಿಂದೆ ಯುವಕ ಚಿನ್ಮಯ್ ಮೊಬೈಲ್‌ಗೆ ಆತನದ್ದೇ ಖಾಸಗಿ ಫೋಟೋಗಳು ಬಂದಿತ್ತು. ಸೈಬರ್ ವಂಚಕರು, ಇನ್ನೂ ಹಲವು ಖಾಸಗಿ ಫೋಟೋಗಳಿವೆ. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಬಾರದು ಅಂದರೆ ನಾವು ಹೇಳಿದಷ್ಟು ಹಣ ಕೊಡಬೇಕು ಎಂದು ಬೆದರಿಸಿದ್ದರು.

ಇದರಿಂದ ನೊಂದಿದ್ದ ಯುವಕ, ಏ.15ರಂದು ಕಸ ಹಾಕಲು ಹೋದವನು ಮನೆಯಿಂದ ನಾಪತ್ತೆಯಾಗಿದ್ದಾನೆ. ಯಾರಾದರೂ ಕಿಡ್ನ್ಯಾಪ್ ಮಾಡಿದ್ರ? ಅಥವಾ ತಾನೇ ಎಲ್ಲಾದರೂ ಹೋಗಿದ್ದಾನಾ ಎಂಬುದರ ಬಗ್ಗೆ ಹುಳಿಮಾವು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ