Breaking News

ಬಸ್ ಸ್ಟಾಂಡ್‌ನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು…!

Spread the love

ಗೋಕಾಕ್: ನಗರದ ಬಸ್ ಸ್ಟ್ಯಾಂಡ್ ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಪ್ರಾಥಮಿಕವಾಗಿ ಇದು ಅನಾರೋಗ್ಯದಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾರ್ವಜನಿಕರು ಯಾರಾದರೂ ಈ ವ್ಯಕ್ತಿಯನ್ನು ಗುರುತಿಸಿದರೆ ಗೋಕಾಕ್ ಶಹರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ. ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ: 9480804065 ನೀಡಲಾಗಿದೆ.

ಈ ಕುರಿತು ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ