Breaking News

ನಿರ್ಲಕ್ಷಿಸಿದರೆ ಭಾರತದಲ್ಲಿ 20 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ : ರಾಹುಲ್ ಎಚ್ಚರಿಕೆ

Spread the love

ನವದೆಹಲಿ,ಜು.17- ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲಿ ಆಗಷ್ಟ್ 10 ರ ವೇಳೆಗೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಎಡವಿರುವುದರಿಂದ ಈಗಾಗಲೆ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆಯಾಗಿದೆ.

ಇದೇ ಧೋರಣೆ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ಹರಡಲಿದೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಕೊರೊನಾ ಹೆಚ್ಚಳದಲ್ಲಿ ಅಮೆರಿಕಾ, ಬ್ರೇಜಿಲ್ ನಂತರದ ಸ್ಥಾನವನ್ನು ಭಾರತ ಪಡೆದುಕೊಂಡಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸೋಂಕು ತಡೆಗಟ್ಟುವಲ್ಲಿ ಯಾವುದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ.ಇನ್ನು ಮುಂದಾದರೂ ಸೋಂಕು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಅನುಸರಿಸುವ ಮೂಲಕ ದೇಶದ ಜನರನ್ನು ಕೊರೊನಾ ಸೋಂಕಿನಿಂದ ಮುಕ್ತಗೊಳಿಸುವತ್ತ ಗಮನಹರಿಸಬೇಕು ಎಂದು ರಾಹುಲ್ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್​ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

Spread the loveಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ನಿಗದಿಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ