Breaking News

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Spread the love

ಬೆಳಗಾವಿ: ನಗರದ  ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ  ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ.

ವಕೀಲೆ ಪೂಜಾ ಕಾಕತಕರ್ ಮನೆ ಮೇಲೆ ದಾಳಿ ನಡೆದಿದೆ. ಏ.25ರ ರಾತ್ರಿ 1ರಿಂದ 2 ಗಂಟೆಯ ಸುಮಾರಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ.

ಮನೆಯ ಮೊದಲ ಮಹಡಿಯಲ್ಲಿ ಪುತ್ರಿ ಓದುತ್ತಿದ್ದಳು. ಈ ವೇಳೆ ದಾಳಿ ನಡೆದಿದೆ. ಮನೆಯ ಗ್ಲಾಸ್ ಮೇಲೆ ಫೈರಿಂಗ್ ಮಾರ್ಕ್ ಬಿದ್ದಿದ್ದು, ಘಟನಾ ಸ್ಥಳಕ್ಕೆ ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪೂಜಾ ಅವರು ಕಳೆದ 18 ವರ್ಷಗಳಿಂದ ವಕೀಲಿ ವೃತ್ತಿಯನ್ನು ಮಾಡುತ್ತಿದ್ದಾರೆ. ಅವರು ಹೈ ಪ್ರೊಫೈಲ್ ಕೇಸ್ ಪರ ವಾದ ಮಾಡುತ್ತಿದ್ದಾರೆ. ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ