Breaking News

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Spread the love

ಚಿತ್ರದುರ್ಗ: ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಪರೋಕ್ಷವಾಗಿ ಡಿ.ಕೆ ಶಿವಕುಮಾರ್  ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ  ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅವರು ಮಾತನಾಡಿದರು. ಈ ವೇಳೆ ಸಚಿವ‌ ಸುಧಾಕರ್ ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಈ ವೇಳೆ ನಾನು ಜೆಡಿಎಸ್ ಸ್ಥಾನದ ಬಗ್ಗೆ ಚರ್ಚೆ ಮಾಡಲ್ಲ. ಹಿರಿಯೂರು ಸೇರಿದಂತೆ ಬೇರೆ ಕ್ಷೇತ್ರದ ಬಗ್ಗೆಯೂ ಮಾತಾಡಲ್ಲ. ಆದರೆ ಆಸ್ಪತ್ರೆಯ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೋ ಪಾಪ. ಯಾವ ಕಾರಣಕ್ಕೆ ಕೆಲ ವಿಷಯ ಮುಚ್ಚಿಟ್ಟಿದ್ದಾರೆ ಎಂಬುದು ಅರಿಯಬೇಕು. ಆ ವ್ಯಕ್ತಿಯಿಂದ‌ ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂಬ ಅನುಮಾನ ವ್ಯಕ್ತಪಡಿಸಿದರು.

ನಾವು ಇತಿಹಾಸ ನೋಡಿದ್ದೇವೆ. ಯಾವ ಕಾರಣಕ್ಕೆ ಮುಂದೂಡುತ್ತಿದ್ದಾರೆ. ಇಂಥ ವಿಚಾರಗಳಲ್ಲಿ ನಾನು ಚರ್ಚೆ ಮಾಡಲ್ಲ. ಆದರೆ ಕೆಲ ವ್ಯಕ್ತಿಗಳು ಇಂಥ ಸಮಯವನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಹಿಂದ ಸಮಾವೇಶ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೈ ನಾಯಕರು ಕುರ್ಚಿ ಉಳಿಸಿಕೊಳ್ಳಲು ಅಹಿಂದ ಸಮಾವೇಶ ನಡೆಸ್ತಿದ್ದಾರೆ. ಅಹಿಂದ ಸಮುದಾಯದ ಜನ ಏನು ಹೇಳ್ತಿದ್ದಾರೆ. ನಮ್ಮ ಭಿಕ್ಷೆಯಿಂದ ಕಾಂಗ್ರೆಸ್‌ಗೆ (Congress) ಅಧಿಕಾರ ಎನ್ನುತ್ತಿದ್ದಾರೆ. ಈ ಪರಿಸ್ಥಿಯಲ್ಲಿ ಸಮಾವೇಶ ಮಾಡ್ತಿದ್ದಾರೆ. ಸಮಾವೇಶಕ್ಕೆ ದುಡ್ಡು ಖರ್ಚು ಮಾಡಿ ಜನ ಸೇರಿಸುತ್ತಾರೆಂದು ಆರೋಪಿಸಿದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ