Breaking News

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್ ಸ್ಟೋಕ್ – 25 ವರ್ಷದ ಟೆಕ್ಕಿ ಸಾವು

Spread the love

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 25 ವರ್ಷದ ಟೆಕ್ಕಿ ಶ್ವೇತಾ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯವರಾದ ಶ್ವೇತಾ, ಶನಿವಾರ ಕೆಲಸ ಮುಗಿಸಿ ಮನೆಗೆ ಬಂದು ತಾಯಿಯೊಂದಿಗೆ ಮಾತನಾಡುತ್ತಿದ್ದಾಗ ಕುಸಿದು ಬಿದ್ದಿದ್ದರು. ಬೆಂಗಳೂರಿಗೆ ಕರೆತರುವಷ್ಟರಲ್ಲಿ ಕೋಮಾಗೆ ಜಾರಿದ್ದರು. ಅಂಗಾಂಗ ದಾನಕ್ಕೆ ನಿರ್ಧರಿಸಿದ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟ ಕಾರಣ ಅದು ಸಾಧ್ಯವಾಗಿಲ್ಲ. ಆರೋಗ್ಯವಾಗಿದ್ದ ಯುವತಿ ದಿಢೀ‌ರ್ ಬ್ರೈನ್ ಸ್ಟೋಕ್‌ನಿಂದ ಸಾವನ್ನಪ್ಪಿರುವುದು ಆತಂಕ ಮೂಡಿಸಿದೆ. ಮೃತದೇಹ ಹಾಸನಕ್ಕೆ ರವಾನಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ