ಏಪ್ರಿಲ್ 28, 29 ಮತ್ತು 30 ರಂದು ಮಳೆ ಆಗಲಿದ್ದು, 17 ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಮೈಸೂರು, ದಾವಣಗೆರೆ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸೂಚನೆಗಳಿವೆ.
Laxmi News 24×7