Breaking News

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಗಣತಿ ಪ್ರಗತಿ ಪರಿಶೀಲನಾ ಸಭೆ

Spread the love

ಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ವಿವಿಧ ಸ್ತರದ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಅವಧಿ ಒಳಗೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷೃ ಮಾಡಬೇಡಿ ಎಂದು ಆಯುಕ್ತ ಕಾರ್ತಿಕ್.ಎಂ. ತಿಳಿಸಿದರು.
ನಗರದ ಪಾಲಿಕೆ ಸಭಾಂಗಣದಲ್ಲಿ  ಜರುಗಿದ ಗಣತಿ ಕಾರ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಗಣತಿದಾರರ ಕಾರ್ಯ ವೇಗ ಪಡೆಯಲು ವಿವಿಧ ಸ್ತರದ ಮೇಲಾಧಿಕಾರಿ ಹಾಗೂ ಸಿಬ್ಬಂದಿ ನಿರಂತರ ಸಂಪರ್ಕ ಮತ್ತು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ವಿಳಂಬ ಮಾಡುವುದು ಸರಿಯಲ್ಲ ಎಂದರು.
ಮಹಾನಗರ ಕೆಲ ಭಾಗದಲ್ಲಿ ನಿಧಾನವಾಗಿರುವ ಬ್ಲಾಕ್ ಸಮಸ್ಯೆ ಇತ್ಯರ್ಥ ಪಡಿಸಿ ಗಣಿತಿ ಕಾರ್ಯ ವೇಗ ಪಡೆದುಕೊಳ್ಳುವಂತೆ ಉಸ್ತುವಾರಿ ಅಧಿಕಾರಿಗಳು ನಿಗಾ ವಹಿಸಬೇಕು. ಪ್ರತಿ ದಿನದ ಗಣತಿ ಕಾರ್ಯ ಕುರಿತು ಮೇಲಾಧಿಕಾರಿಗಳಿಗೆ ವರದಿ ನೀಡುವುದು ಕಡ್ಡಾಯ. ನೆಪ ಹೇಳದೆ ಸಿಬ್ಬಂದಿ ತಮಗೆ ವಹಿಸಿದ ಕಾರ್ಯಗಳನ್ನು ತ್ವರಿತವಾಗಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿ ವಿಳಂಬ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಾಲಿಕೆ ಉಪ ಆಯುಕ್ತ (ಕಂದಾಯ), ನಗರ ಗಣತಿ ಅಧಿಕಾರಿ ಡಾ. ಸಿದ್ದು ಹುಲ್ಲೋಳಿ ಮಾತನಾಡಿ, ನಿಗದಿ ಪಡಿಸಿದ ಅವಧಿ ಒಳಗಾಗಿ  ಗಣತಿ ಕಾರ್ಯ ಪೂರ್ಣಗೊಳಿಸಿದ ಸಿಬ್ಬಂದಿಯ ಕಾರ್ಯ ಶ್ಲಾಘಿನೀಯ. ಶೀಘ್ರವಾಗಿ ಅಂತಹ ಸಿಬ್ಬಂದಿಗೆ ಅಭಿನಂದನಾ ಪತ್ರ ನೀಡಿ ಗೌರವಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು. ಗಣತಿ ಕಾರ್ಯ ಆರಂಭಿಸದಿರುವ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಪಾಲಿಕೆ ಆಡಳಿತ  ವಿಭಾಗದ  ಉಪ ಆಯುಕ್ತ ಉದಯಕುಮಾರ ಬಿ.ಟಿ.. ಗಣತಿಯ ಎಲ್ಲ ಚಾರ್ಜ ಅಧಿಕಾರಿಗಳು  ಇತರರಿದ್ದರು.

Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ