ಬೆಳಗಾವಿ: ಖ್ಯಾತ ಹಾಸ್ಯ ಬರಹಗಾರ ಎಂ.ಎಸ್.ನರಸಿಂಹ ಮೂರ್ತಿ ಅವರನ್ನು ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.
ಕನ್ನಡಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ರಂಗಸೃಷ್ಟಿ ಪದಾಧಿಕಾರಿಗಳು ನರಸಿಂಹಮೂರ್ತಿಯವರನ್ನು ಸನ್ಮಾನಿಸಿದರು. ಇದಕ್ಕೂ ಮೊದಲು, ಮಂಗಳವಾರ ಪ್ರದರ್ಶನವಾಗಲಿರುವ ಎಂ.ಎಸ್ ನರಸಿಂಹ ಮೂರ್ತಿ ಅವರ ರಚನೆಯ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕದ ರಂಗತಾಲೀಮು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸೆಕೆಂಡ್ ಹ್ಯಾಂಡ್ ಸದಾಶಿವ ಅಮೇರಿಕದಲ್ಲಿ ಅತ್ಯಂತ ಯಶಸ್ವಿಯಾಗಿ ಪ್ರದರ್ಶನ ಕಂಡ ನಾಟಕವಾಗಿದ್ದು, ರಂಗಸೃಷ್ಟಿ ತಂಡದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ನಿರ್ದೇಶನ ಮತ್ತು ಅಭಿನಯ ಎರಡೂ ಅತ್ಯುತ್ತಮವಾಗಿತ್ತು. ಸ್ಥಳೀಯವಾಗಿ ಭಾಷೆಗಳನ್ನು ಬದಲಾವಣೆ ಮಾಡಿಕೊಂಡಾಗ ನಾಟಕ ಹೆಚ್ಚು ಪರಿಣಾಮಕಾರಿಯಾಗಿ ಮೂಡಿಬರುತ್ತದೆ. ಅದನ್ನು ಇಲ್ಲಿ ಮಾಡಿರುವುದು ಶ್ಲಾಘನೀಯ ಎಂದರು.
ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ, ಉಪಾಧ್ಯಕ್ಷ ಎಂ.ಕೆ.ಹೆಗಡೆ, ಶೈಲಜಾ ಬಿಂಗೆ, ಕಾರ್ಯದರ್ಶಿ ಶರಣಗೌಡ ಪಾಟೀಲ, ಖಜಾಂಚಿ ಶಾಂತಾ ಆಚಾರ್ಯ, ನಿರ್ದೇಶಕರಾದ ಡಾ.ರಾಮಕೃಷ್ಣ ಮರಾಠೆ, ಶಿರೀಶ ಜೋಶಿ, ಶರಣಯ್ಯ ಮಠಪತಿ, ಕನ್ನಡ ಭವನದ ಕಾರ್ಯದರ್ಶಿ ಯ.ರು.ಪಾಟೀಲ, ಕಲಾವಿದರಾದ ವಾಮನ ಮಳಗಿ, ವಿಶ್ವನಾಥ ದೇಸಾಯಿ, ಅನುಶ್ರೀ ರಘುವೀರ, ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಜಗಜಂಪಿ, ಮುಜರಾಯಿ ಇಲಾಖೆಯ ನಿವೃತ್ತ ಅಧಿಕಾರಿ ರವಿ ಕೊಟಾರಗಸ್ತಿ ಇತರರಿದ್ದರು.
Laxmi News 24×7