Breaking News

ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳು; ಎಚ್ಚರಿಕೆ ನೀಡಿದ ರೈತರು

Spread the love

ವಿಶ್ವಗುರು ಬಸವಣ್ಣನವರ ಜನ್ಮಭೂಮಿ ಇಂಗಳೇಶ್ವರದಿಂದ ಬಿಸನಾಳಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆರೋಪಿಸಿದರು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಖಂಡ ಕರ್ನಾಟಕ ರೈತಸಂಘದ ವತಿಯಿಂದ ಪತ್ರಿಕಾಗೋಷ್ಠಿ ಯಲ್ಲಿ‌ ಮಾತನನಾಡಿದ ಅವರು ಮಳೆಗಾಲದಲ್ಲಿ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಡುವುದರಿಂದ ರೈತರು, ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚಾರಕ್ಕೆ ಹರಸಾಹಸ ಪಡುವಂತಾಗಿದೆ. ರಸ್ತೆ ದುರಸ್ತಿ ಕುರಿತು ಸಂಬಂಧಿತ ಅಧಿಕಾರಿಗಳನ್ನು ಪ್ರಶ್ನಿಸಿದರೂ, ಯಾವ ಇಲಾಖೆ ವ್ಯಾಪ್ತಿಗೆ ರಸ್ತೆ ಬರುತ್ತದೆ ಎಂಬುದನ್ನು ಸ್ಪಷ್ಟಪಡಿಸದೇ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರೈತರ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅರವಿಂದ ಕುಲಕರ್ಣಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಹಲವು ರೈತ ಮುಖಂಡರು ಉಪಸ್ಥಿತರಿದ್ದು, ರಸ್ತೆ ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ