Breaking News

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Spread the love

ಬೆಂಗಳೂರು: ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ ಅಂತ ವಿಪಕ್ಷ ನಾಯಕ ಆರ್.ಅಶೋಕ್  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಂಡಿ ಮುಚ್ಚಲು ಕೋಟಿ ಕೋಟಿ ಹಣ ಖರ್ಚು ಮಾಡಿದ ವಿಚಾರವಾಗಿ ʻಪಬ್ಲಿಕ್ ಟಿವಿʼ ಸುದ್ದಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗುಂಡಿ ಮುಚ್ಚಿದ ಹಣ ಗುಂಡಿಗೆ ಹೋಗಿದೆ. ಗುಂಡಿ ಮುಚ್ಚೋಕೆ ಎಲ್ಲಾದ್ರೂ ಒಂದು ಲಕ್ಷ ಖರ್ಚಾಗುತ್ತದೆಯಾ? ಬೆಂಗಳೂರು ಜನ ಶಾಪ ಹಾಕುತ್ತಿದ್ದಾರೆ. ಎಲ್ಲಾ ಬೆಲೆ ಜಾಸ್ತಿ ಮಾಡಿದ್ದಾರೆ. ಗುಂಡಿ ಮುಚ್ಚೋದ್ರಲ್ಲಿ ಹೇಗೆ ಹಣ ಮಾಡಬೇಕು ಎಂದು ಕಾಂಗ್ರೆಸ್ ಅವರನ್ನ ಕೇಳಬೇಕು ಎಂದು ಕಿಡಿಕಾರಿದ್ದಾರೆ.

ಇಷ್ಟು ಹಣ ಖರ್ಚು ಮಾಡಿರೋದು ಬೋಗಸ್. ಈ ಅಕ್ರಮದ ಬಗ್ಗೆ ತನಿಖೆ ಆಗಬೇಕು. ಸದನದ ಸಮಿತಿ ರಚನೆ ಮಾಡಿ ತನಿಖೆ ಆಗಲಿ. ನಾವು ಅವರಿಗೆ ಲೆಕ್ಕ ಕೊಡ್ತೀವಿ. ಮುಚ್ಚಿರುವ ಗುಂಡಿಗಳು ಮತ್ತೆ ಓಪನ್ ಆಗಿವೆ. ಇವರ ಬೋಗಸ್ ಗುಂಡಿ ಲೆಕ್ಕ ನಾವು ಕೊಡ್ತೀವಿ ಅಂತ ಸದನ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ