Breaking News

ಕುಡಿಯುವ ನೀರಿಗಾಗಿ ಖಾಸಗಿಯವರ ಕೊಳವೆ ಬಾವಿ ಗುರುತಿಸಿ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವಂತ ಗ್ರಾಮಗಳಲ್ಲಿ ಕನಿಷ್ಠ ಮೂರು ಖಾಸಗಿ ಕೊಳವೆ ಬಾವಿ ಗುರುತಿಸಿಕೊಳ್ಳಬೇಕು. ಜಾನುವಾರಗಳಿಗೆ ನೀರು, ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಎಚ್ಚರಿಕೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ  ಕುಡಿಯುವ ನೀರು ಹಾಗೂ ಮೇವು ಪೂರೈಕೆ ಕುರಿತು ಜಿಲ್ಲಾ, ತಾಲೂಕು ಮತ್ತು ಗ್ರಾಪಂ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ  ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ ಕಡ್ಡಾಯವಾಗಿ ಟ್ಯಾಂಕರ್ ಮೂಲಕ ಪೂರೈಕೆ ಮಾಡಬೇಕು. ಜಾನುವಾರಗಳಿಗಾಗಿ ಕೆರೆ, ಕಟ್ಟೆಗಳಲ್ಲಿ ನೀರು ಸಂಗ್ರಹ ಕ್ರಮ ವಹಿಸಿ ಎಂದರು.
ಈ ಬಾರಿ ಮೇನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹು ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಗ್ರಾಮಗಳಲ್ಲಿ ಕನಿಷ್ಟ ಮೂರು ಖಾಸಗಿ ಬೋರವೆಲ್ ಗಳನ್ನು ಗುರುತಿಸಿ ಇಟ್ಟುಕೊಳ್ಳಬೇಕು. ಅಗತ್ಯಬಿದ್ದರೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ತುರ್ತಾಗಿ ನೀರು ಪೂರೈಸಲು ಕ್ರಮವಹಿಸಬೇಕು.ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮ ಪಂಚಾಯತ ಆಡಳಿತಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್ ರವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಕುಂದುಕೊರತೆಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದರು.
ಈಗಾಗಲೇ ತಾಲೂಕುಮಟ್ಟದಲ್ಲಿ ಟಾಸ್ಟಪೋರ್ಸ್ ಸಭೆಗಳನ್ನು ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಕೂಡ ಮತ್ತೊಮ್ಮೆ ಸಭೆ ಕೈಗೊಂಡು ಕುಡಿಯುವ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ಪೇಂಟ್ ಮೂಲಕ ದಿನಾಂಕಗಳನ್ನು ಬರೆಯಿಸಬೇಕು ಎಂದು ಸೂಚಿಸಿದರು.
ಎಲ್ಲ ತಾಲೂಕುಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಹಾಯವಾಣಿ ಕೇಂದ್ರ ಸ್ಥಾಪಿಸಿ, ದೂರುಗಳು ಬಂದರೆ ತುರ್ತಾಗಿ ಕ್ರಮವಹಿಸಬೇಕು.ಅಥಣಿ: 9480854100/ 9342399715, ಬೆಳಗಾವಿ: 9480854110/ 8971012514,ಬೈಲಹೊಂಗಲ: 9480854105/ 9900575555,ಚಿಕ್ಕೋಡಿ: 9480854115/ 9483250767,ಗೋಕಾಕ: 9480854120/ 9448640217, ಹುಕ್ಕೇರಿ: 9480854125/ 9113047775 ಸಹಾಯವಾಣಿ ಸಂಖ್ಯೆಗೆ ಜನರು ಸಂಪರ್ಕಿಸಬೇಕು ಎಂದು ಸೂಚಿಸಿದರು.
ಜಿಪಂ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ,  ಮುಖ್ಯ ಯೋಜನಾಧಿಕಾರಿ ಗಂಗಾಧರ  ಯೋಜನಾಧಿಕಾರಿ ರವಿ ಬಂಗಾರಪ್ಪನವರ ಇತರರಿದ್ದರು.

Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ