Breaking News

ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು

Spread the love

 

ಪ್ರೀತಿಸಿ ಮದುವೆಯಾಗಿದ್ದ ಸಬ್ ಇನ್ಸ್ ಪೆಕ್ಟರ್ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಈ ಘಟನೆ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.


Spread the love

About Laxminews 24x7

Check Also

Special: ಕನ್ನಡವೇ ನಮ್ಮ ಉಸಿರು, ಕರ್ನಾಟಕವೇ ನಮ್ಮ ಹೆಮ್ಮೆ

Spread the loveನವೆಂಬರ್ 1, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಅತ್ಯಂತ ಹೆಮ್ಮೆಯ, ಅಭಿಮಾನದ ಹಾಗೂ ಸಂಭ್ರಮದ ದಿನ. ಕನ್ನಡ ನಾಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ