Breaking News

ಆಸ್ತಿ ತೆರಿಗೆ ಪಾವತಿದಾರರಿಗೆ ಶೇಕಡ 5%ರಷ್ಟು ರಿಯಾಯಿತಿ ನೀಡಿ ಮುಖ್ಯ ಆಯುಕ್ತರಿಗೆ ಎಮ್.ಶಿವರಾಜು, ಅಬ್ದುಲ್ ವಾಜಿದ್ ಮನವಿ

Spread the love

ಜಿಬಿಎ ಕೇಂದ್ರ ಕಛೇರಿ: ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರನ್ನು ಆಡಳಿತ ಪಕ್ಷದ ಮಾಜಿ ನಾಯಕರಾದ ಎಮ್.ಶಿವರಾಜುರವರು, ವಿರೋಧ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜಿದ್ ರವರು ಭೇಟಿ ನೀಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ.5% ರಷ್ಟು ರಿಯಾಯತಿ ಅನ್ನು ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿದರು

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಪ್ರತಿ ವರ್ಷ ಏಪ್ರಿಲ್ ಮೇ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವರಿಸುವ ತೆರಿಗೆದಾರರಿಗೆ ಶೇ.5% ರಷ್ಟು ರಿಯಾಯಿತಿ ಅನ್ನು ನೀಡಲಾಗುತ್ತಿತ್ತು

ಆದರೆ, 2026-27ನೇ ಸಾಲಿನಲ್ಲಿ ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದ ತೆರಿಗೆದಾರರಿಗೆ ಮಾತ್ರ ಶೇ.5% ರಷ್ಟು ರಿಯಾಯಿತಿಯನ್ನು ನೀಡಲಾಗಿದ್ದು ದಿನಾಂಕ: 16-04-2026 ರಿಂದ ದಿನಾಂಕ: 15-05-2026 ರವರೆಗೆ ಜನಗಣತಿ-2027ರ ಕೆಲಸಗಳು ಚಾಲ್ತಿಯಲ್ಲಿರುವ ಕಾರಣ ಕಂದಾಯ ವಿಭಾಗದ ಎಲ್ಲಾ ಸಿಬ್ಬಂಧಿಗಳು ಇದರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಹಲವಾರು ತೆರಿಗೆದಾರರು ನಿಗಧಿತ ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ

ಈ ಹಿನ್ನಲೆಯಲ್ಲಿ, ಸಾರ್ವಜನಿಕರ ಆರ್ಥಿಕ ಹಿತದೃಷ್ಟಿಯಿಂದ ಪ್ರತಿ ವರ್ಷದಂತೆ ನಿಗಧಿತ ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸುವ ತೆರಿಗೆದಾರರಿಗೆ ಶೇ.5% ರಷ್ಟು ರಿಯಾಯಿತಿ ಅನ್ನು ದಿನಾಂಕ: 31-05-2026ರವರೆಗೆ ವಿಸ್ತರಿಸಬೇಕೆಂದು ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ