Breaking News

ಜನಿವಾರ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

Spread the love

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಘಟನೆಯನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬ್ರಾಹ್ಮಣ ಸಮಾಜವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪರೀಕ್ಷೆಯಲ್ಲಿ ಜನಿವಾರಕ್ಕೆ ಅವಮಾನ ಮಾಡಿದ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಈ ವೇಳೆ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಅರವಿಂದ ಕುಲಕರ್ಣಿ ಅವರು ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಿತ್ತು ಹಾಕಿದ ಕಾಲೇಜು ಆಡಳಿತ ಮಂಡಳಿಯ ಮೇಲೆ ಕೂಡಲೇ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಘಟನೆ ಇಡೀ ಸಮಾಜಕ್ಕೆ ತಲೆತಗ್ಗಿಸುವಂತದ್ದು, ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ