Breaking News

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Spread the love

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಂಕು ತಗುಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅಭಿಷೇಕ್ ಪತ್ನಿ ಐಶ್ವರ್ಯಾ ರೈ ಮತ್ತು ಆರಾಧ್ಯ ಅವರಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಕೂಡ ಶುಕ್ರವಾರ ರಾತ್ರಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಚ್ಚನ್ ಕುಟುಂಬದ ನಾಲ್ವರು ಸದಸ್ಯರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಐಶ್ವರ್ಯಾ ಮತ್ತು ಆರಾಧ್ಯ ಅವರಿಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡು ಉಸಿರಾಟ ಸಮಸ್ಯೆಯಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲೇ ಆಸ್ಪತ್ರೆಯಲ್ಲಿದ್ದ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರೊಂದಿಗೆ ಐಶ್ವರ್ಯಾ ಮತ್ತು ಆರಾಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಕಾಣಿಸಿಕೊಂಡರೂ ಲಕ್ಷಣ ಇಲ್ಲದ ಕಾರಣ ಇಬ್ಬರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಜಯಾ ಬಚ್ಚನ್ ಅವರಿಗೆ ಸೋಂಕು ತಗುಲಿಲ್ಲ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ