Breaking News

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Spread the love

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ (Rain) ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶವಾಗಿದೆ.

ಅರಕಲಗೂಡು ತಾಲೂಕಿನ, ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಬಿರುಗಾಳಿಯ ಲೋಕೇಶ್, ಪರಮೇಶ್, ನಾಗರಾಜ್ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ಸರ್ವನಾಶವಾಗಿವೆ. ಫಸಲಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ಬಾಳೆಗೊನೆ ಕಟಾವು ಮಾಡಿ ಮಾರಾಟ ಮಾಡಬೇಕಿತ್ತು. ಆದರೆ ಭಾರೀ ಮಳೆ, ಗಾಳಿಗೆ ಬಾಳೆಗೊನೆ ಸಹಿತ ಗಿಡ ಮುರಿದು ಬಿದ್ದಿವೆ. ಇದರಿಂದಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.

ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ರೈತರು ಒತ್ತಾಯಿಸಿದ್ದಾರೆ. ಇದೇ ಗ್ರಾಮದ ಕೆಲ ರೈತರು ಬೆಳೆದಿದ್ದ ಮೆಕ್ಕೆಜೋಳ ಕೂಡ ನೆಲಕಚ್ಚಿದ್ದು ಎರಡು ವಾಸದ ಮನೆಗಳ ಹಂಚುಗಳು ಹಾರಿ ಹೋಗಿವೆ. ಇಷ್ಟಾದರೂ ಗ್ರಾಮಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ