Breaking News

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Spread the love

ಬೆಂಗಳೂರು: ನಟ ದರ್ಶನ್‌ಗೆ  ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್  ನಿರ್ದೇಶನ ನೀಡಿದೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ನೀಡಿಲ್ಲ. ದರ್ಶನ್ ಅವರನ್ನು ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಈವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆಯಾಗಿದೆ. ಇನ್ನು ಉಳಿದ ಸಾಕ್ಷ್ಯಗಳ ವಿಚಾರಣೆ ಪ್ರಕ್ರಿಯೆಗೆ ಎಷ್ಟು ಸಮಯ ಬೇಕು ಎಂಬುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ