Breaking News

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ವಿಧಾನಸೌಧ, ಕಾರ್ಪೋರೇಷನ್ ಸುತ್ತಮುತ್ತ ಮಳೆಯಾಗಿದೆ.


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ