Breaking News

ಎಂಟು ವರ್ಷಗಳ ಪ್ರೇಮ ಸಂಬಂಧ… ಮದುವೆ ಹಂತದಲ್ಲಿ ಮುರಿದ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ

Spread the love

ಇಂಟಲಿಜೆನ್ಸ್ ಪಿಎಸ್‌ಐ ವೀರೇಶ್ ಆಲೂರು ಹಾಗೂ ರಾಯಚೂರು ಗ್ರಾಮೀಣ ಠಾಣೆಯ ಲೇಡಿ ಪೇದೆ ನಡುವಿನ ಪ್ರೇಮ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ.
ಇಬ್ಬರೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕೋಚಿಂಗ್ ಸೆಂಟರ್‌ನಲ್ಲಿ ಪರಿಚಯವಾಗಿದ್ದು, ಬಳಿಕ ಸ್ನೇಹ ಪ್ರೀತಿಗೆ ತಿರುಗಿದೆ. ಕಳೆದ ಎಂಟು ವರ್ಷಗಳಿಂದ ಇಬ್ಬರೂ ಆತ್ಮೀಯ ಸಂಬಂಧದಲ್ಲಿದ್ದು, ಹಲವು ವರ್ಷ ಒಂದೇ ರೂಮಿನಲ್ಲಿ ವಾಸವಾಗಿದ್ದರೆಂದು ತಿಳಿದುಬಂದಿದೆ.
ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಹಾರ ಬದಲಿಸಿಕೊಂಡು ಮದುವೆ ಪ್ರತಿಜ್ಞೆ ಮಾಡಿಕೊಂಡಿದ್ದರೆಂಬ ಮಾಹಿತಿಯೂ ಲಭ್ಯವಾಗಿದೆ.
ಇದೀಗ ಮದುವೆ ವಿಷಯದಲ್ಲಿ ಲೇಡಿ ಪೇದೆ ನಿರಾಕರಣೆ ವ್ಯಕ್ತಪಡಿಸಿದ್ದು, ಪ್ರಕರಣ ತೀವ್ರ ತಿರುವು ಪಡೆದಿದೆ.
ಪಿಎಸ್‌ಐ ವೀರೇಶ್ ಅವರು, ಲೇಡಿ ಪೇದೆ ಹಾಗೂ ಅವರ ಕುಟುಂಬಕ್ಕೆ ಸುಮಾರು 35 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿರುವುದಾಗಿ ಆರೋಪಿಸಿದ್ದಾರೆ. ಮನೆ ನಿರ್ಮಾಣ, ಟ್ರಾಕ್ಟರ್ ಖರೀದಿ ಸೇರಿದಂತೆ ಹಲವು ರೀತಿಯಲ್ಲಿ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಆದರೆ, ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಜಯಶ್ರೀ ಮತ್ತೊಬ್ಬನೊಂದಿಗೆ ಮೇ 7ರಂದು ರಾಯಚೂರಿನಲ್ಲಿ ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಕುರಿತು ರಾಜಿ ಪಂಚಾಯಿತಿ ನಡೆಸಲು ಪ್ರಯತ್ನ ನಡೆದಿದ್ದು, ಮಾಜಿ ಶಾಸಕ ಶರಣಪ್ಪ ಸುಣಗಾರ ಸಮ್ಮುಖದಲ್ಲಿಯೂ ಮಾತುಕತೆ ನಡೆದಿದೆ. ಜೊತೆಗೆ ಪೊಲೀಸ್ ಅಧಿಕಾರಿಗಳ ಮಟ್ಟದಲ್ಲಿಯೂ ಸಮಾಧಾನ ಸಭೆ ನಡೆದರೂ ಯಾವುದೇ ಪರಿಹಾರ ಕಂಡುಬಂದಿಲ್ಲ.
ಈ ನಡುವೆ “ನನಗೆ ನ್ಯಾಯ ಬೇಕು” ಎಂದು ಪಿಎಸ್‌ಐ ವೀರೇಶ್ ಆಲೂರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಟೆಂಪೊ ಪಲ್ಟಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿಗೆ ಗಾಯ

Spread the loveಚನ್ನಮ್ಮನ ಕಿತ್ತೂರು: ಇಲ್ಲಿನ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ, ಸಿಮೆಂಟ್‌ ಕಂಬಗಳನ್ನು ಸಾಗಣೆ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ