Breaking News

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – 48 ಮಂದಿಗೆ ಬಿದ್ದಿತು ದಂಡದ ಬಿಸಿ

Spread the love

ಬೆಳಗಾವಿ ನಗರದ ಶಹಾಪುರ ಪ್ರದೇಶದಲ್ಲಿಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಭರ್ಜರಿ ಬೇಟೆಯಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರು ಹಾಗೂ ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ಕೋಟ್ಪಾ (COTPA) ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಲಾಯಿತು.
ಬೆಳಗಾವಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಇಂದು ನಗರದ ಶಹಾಪುರ ವ್ಯಾಪ್ತಿಯಲ್ಲಿ ‘ಕೋಟ್ಪಾ-2003’ ಕಾಯ್ದೆಯಡಿ ವಿಶೇಷ ಜಾಗೃತಿ ಹಾಗೂ ದಾಳಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜಾರಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರು ಮತ್ತು ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಲಾಯಿತು.
ಕಾರ್ಯಾಚರಣೆಯ ವೇಳೆ ಒಟ್ಟು 48 ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಲಾಯಿತು. ಕೇವಲ ದಂಡ ವಿಧಿಸುವುದು ಮಾತ್ರವಲ್ಲದೆ, ತಂಬಾಕು ಸೇವನೆಯಿಂದ ಉಂಟಾಗುವ ಕ್ಯಾನ್ಸರ್‌ನಂತಹ ಭೀಕರ ಕಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ದಾಳಿಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ, ಸಮಾಜ ಸೇವಕಿ ಕವಿತಾ ರಾಜಣ್ಣವರ, ಆರೋಗ್ಯ ಕೇಂದ್ರದ ಸತೀಶ ಸಜ್ಜನ ಹಾಗೂ ಪೊಲೀಸ್ ಅಧಿಕಾರಿ ವಿಠ್ಠಲ ಬಿದರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಅಹಿಂದ ಮತಗಳೇ ಕಾಂಗ್ರೆಸ್ ಭದ್ರ ಬುನಾದಿ: ಮತಗಳ್ಳತನ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ!

Spread the loveಅಹಿಂದ ವರ್ಗಗಳೇ ಕಾಂಗ್ರೆಸ್ ಪಕ್ಷದ ಶಕ್ತಿ ಎಂದು ಗೃಹ ಸಚಿವ ಜಿ. ಪರಮೇಶ್ವರ ಇಂದು ದೃಢವಾಗಿ ಪ್ರತಿಪಾದಿಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ